ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 27 ಪಾಸಿಟಿವ್, 90 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 27 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 157282 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 90 ಜನರ ವರದಿ ನೆಗೆಟಿವ್ ಬಂದಿದೆ. 27 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 300 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 157282 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 155877 ಜನರ ವರದಿ ನೆಗೆಟಿವ್ ಎಂದು ಬಂದಿದೆ.

20744 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19639 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

562 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 543 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 158853 ಜನರ ಮೇಲೆ ನಿಗಾ ಇಡಲಾಗಿದ್ದು, 6621 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

25674 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 126015 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

31/10/2020 07:13 pm

Cinque Terre

34.19 K

Cinque Terre

1

ಸಂಬಂಧಿತ ಸುದ್ದಿ