ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 3,167 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಈ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,60,449 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 538 ಜನರ ವರದಿ ನೆಗೆಟಿವ್ ಬಂದಿದೆ. 40 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 838 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,60,449 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,58,534 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20,784 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19,707 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 563 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 514 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಜಿಲ್ಲೆಯಾದ್ಯಂತ ಒಟ್ಟು 1,62,020 ಜನರ ಮೇಲೆ ನಿಗಾ ಇಡಲಾಗಿದ್ದು, 8,856 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 24267 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 128383 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
01/11/2020 08:47 pm