ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 18 ಪಾಸಿಟಿವ್, 310 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 654 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 161103 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 310 ಜನರ ವರದಿ ನೆಗೆಟಿವ್ ಬಂದಿದೆ. 18 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 528 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 161103 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 159584 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20802 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19811 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 564 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 427 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 162830 ಜನರ ಮೇಲೆ ನಿಗಾ ಇಡಲಾಗಿದ್ದು, 9068 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 22327 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 131008 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

02/11/2020 09:20 pm

Cinque Terre

43.61 K

Cinque Terre

1

ಸಂಬಂಧಿತ ಸುದ್ದಿ