ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 39 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 162071 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 126 ಜನರ ವರದಿ ನೆಗೆಟಿವ್ ಬಂದಿದೆ. 39 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 325 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 162071 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 160832 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20865 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 19951 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 568 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 346 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 163801 ಜನರ ಮೇಲೆ ನಿಗಾ ಇಡಲಾಗಿದ್ದು, 7798 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 20518 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 135139 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
04/11/2020 10:27 pm