ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 33 ಪಾಸಿಟಿವ್, 76 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 33 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 162162 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 76 ಜನರ ವರದಿ ನೆಗೆಟಿವ್ ಬಂದಿದೆ. 33 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 181 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 162162 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 161103 ಜನರ ವರದಿ ನೆಗೆಟಿವ್ ಎಂದು ಬಂದಿದೆ. 20956 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20078 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 571 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 307 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 163892 ಜನರ ಮೇಲೆ ನಿಗಾ ಇಡಲಾಗಿದ್ದು, 5935 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 18286 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 139364 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

06/11/2020 09:57 pm

Cinque Terre

50.94 K

Cinque Terre

0

ಸಂಬಂಧಿತ ಸುದ್ದಿ