ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 2430 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 164604 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 1160 ಜನರ ವರದಿ ನೆಗೆಟಿವ್ ಬಂದಿದೆ. 60 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1270 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 164604 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 162470 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21028 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20164 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 574 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 290 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 166334 ಜನರ ಮೇಲೆ ನಿಗಾ ಇಡಲಾಗಿದ್ದು, 7669 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16100 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 142275 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
09/11/2020 07:35 am