ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 2953 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 167557 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 1160 ಜನರ ವರದಿ ನೆಗೆಟಿವ್ ಬಂದಿದೆ. 33 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 600 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 167557 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 166109 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21061 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20213 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 576 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 272 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 169287 ಜನರ ಮೇಲೆ ನಿಗಾ ಇಡಲಾಗಿದ್ದು, 9351 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 15131 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 144533 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
09/11/2020 09:47 pm