ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 18 ಪಾಸಿಟಿವ್, 821 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 3764 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 171321 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 821 ಜನರ ವರದಿ ನೆಗೆಟಿವ್ ಬಂದಿದೆ. 18 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1421 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 171321 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 169049 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21079 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20228 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 577 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 274 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 173064 ಜನರ ಮೇಲೆ ನಿಗಾ ಇಡಲಾಗಿದ್ದು, 11860 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14840 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 146090 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

10/11/2020 10:18 pm

Cinque Terre

34.98 K

Cinque Terre

0

ಸಂಬಂಧಿತ ಸುದ್ದಿ