ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 18 ಪಾಸಿಟಿವ್, 58 ನೆಗೆಟಿವ್, 2 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1063 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.

ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 173428 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 58 ಜನರ ವರದಿ ನೆಗೆಟಿವ್ ಬಂದಿದೆ. 18 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 715 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 173428 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 171906 ಜನರ ವರದಿ ನೆಗೆಟಿವ್ ಎಂದು ಬಂದಿದೆ.

21119 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20312 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

581 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 226 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 175173 ಜನರ ಮೇಲೆ ನಿಗಾ ಇಡಲಾಗಿದ್ದು, 12298 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

12757 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 149892 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/11/2020 07:20 pm

Cinque Terre

36.64 K

Cinque Terre

0

ಸಂಬಂಧಿತ ಸುದ್ದಿ