ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 12 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 174523 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 61 ಜನರ ವರದಿ ನೆಗೆಟಿವ್ ಬಂದಿದೆ. 12 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 682 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 174523 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 173072 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21147 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20378 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 583 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 186 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 176268 ಜನರ ಮೇಲೆ ನಿಗಾ ಇಡಲಾಗಿದ್ದು, 12304 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 12018 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 151760 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
14/11/2020 11:06 pm