ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1223 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 178593 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 250 ಜನರ ವರದಿ ನೆಗೆಟಿವ್ ಬಂದಿದೆ. 14 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 861 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 178593 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 177043 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21187 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20498 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 588 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 101 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 180532 ಜನರ ಮೇಲೆ ನಿಗಾ ಇಡಲಾಗಿದ್ದು, 10016 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14752 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 155663 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
18/11/2020 07:30 pm