ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 23 ಪಾಸಿಟಿವ್, 228 ನೆಗೆಟಿವ್, 2 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1780 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 180373 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 228 ಜನರ ವರದಿ ನೆಗೆಟಿವ್ ಬಂದಿದೆ. 23 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1089 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 180373 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 178594 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20520 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 590 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 100 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 182312 ಜನರ ಮೇಲೆ ನಿಗಾ ಇಡಲಾಗಿದ್ದು, 10638 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14801 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 156773 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/11/2020 08:07 pm

Cinque Terre

29.45 K

Cinque Terre

0

ಸಂಬಂಧಿತ ಸುದ್ದಿ