ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1701 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 182074 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 252 ಜನರ ವರದಿ ನೆಗೆಟಿವ್ ಬಂದಿದೆ. 29 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1341 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 182074 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 180043 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21239 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20549 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 592 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 98 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 184013 ಜನರ ಮೇಲೆ ನಿಗಾ ಇಡಲಾಗಿದ್ದು, 11323 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14909 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 157683 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
20/11/2020 10:42 pm