ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 12 ಪಾಸಿಟಿವ್, 276 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1457 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 183531 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 276 ಜನರ ವರದಿ ನೆಗೆಟಿವ್ ಬಂದಿದೆ. 12 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1617 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 183531 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 181218 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21251 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20555 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 593 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 103 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 185470 ಜನರ ಮೇಲೆ ನಿಗಾ ಇಡಲಾಗಿದ್ದು, 12440 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14928 ಜನ ಈಗಾಗಲೇ 14 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 157999 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

21/11/2020 09:53 pm

Cinque Terre

19.81 K

Cinque Terre

0

ಸಂಬಂಧಿತ ಸುದ್ದಿ