ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 12 ಪಾಸಿಟಿವ್, 665 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 2,467 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,86,178 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 665 ಜನರ ವರದಿ ನೆಗೆಟಿವ್ ಬಂದಿದೆ. 12 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 941 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 1,86,178 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,84,532 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21,275 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,570 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 595 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 110 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 1,88,117 ಜನರ ಮೇಲೆ ನಿಗಾ ಇಡಲಾಗಿದ್ದು, 12,484 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14,928 ಜನ ಈಗಾಗಲೇ 15,847 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,59,676 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

23/11/2020 09:58 pm

Cinque Terre

23.51 K

Cinque Terre

0

ಸಂಬಂಧಿತ ಸುದ್ದಿ