ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 15 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,86,193 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 15 ಜನರ ವರದಿ ನೆಗೆಟಿವ್ ಬಂದಿದೆ. 15 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 286 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,86,193 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,85,195 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21,290 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,578 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 595 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 117 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,88,132 ಜನರ ಮೇಲೆ ನಿಗಾ ಇಡಲಾಗಿದ್ದು, 11,274 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 15,808 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,60,933 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
24/11/2020 10:09 pm