ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಂಬಾಕು ಬಿಡಿ, ಗುಲಾಬಿ ಹಿಡಿ: ಆಂದೋಲನ ಕಾರ್ಯಕ್ರಮ

ಧಾರವಾಡ : ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಧಾರವಾಡ ಇವರ ಸಹಯೋಗದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಸೇವನೆ ಮಾಡುವ ಕುರಿತು ತಂಬಾಕು ಮುಕ್ತ ಯುವ ಜನತೆಗಾಗಿ ಗುಲಾಬಿ ಆಂದೋಲನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ತಹಶೀಲ್ದಾರ ಕಚೇರಿ ಆವರಣದಲ್ಲಿ ಗುಲಾಬಿ ಆಂದೋಲನ ಜಾಗೃತಿ ಕಾರ್ಯಕ್ರಮಕ್ಕೆ ತಹಶೀಲ್ದಾರ ಸತೀಶ ಬಿರಾದಾರ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ ಮದೀನಕರ ಅವರು ಹಸಿರು ಬಾವುಟ ತೋರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾಹಿತಿ ಕರಪತ್ರ ಹಾಗೂ ರೋಜ್ ನೀಡುವ ಮೂಲಕ ಪಾನ್‍ಶಾಪ್ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಯಿತು.

ತಹಶೀಲ್ದಾರ ಸತೀಶ ಬಿರಾದಾರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇದಿಸಿ ಸರ್ಕಾರ ಕಾನೂನು ಜಾರಿ ಮಾಡಿದೆ. ಆದರೂ ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಸೇದುವವರ ಸಂಖ್ಯೆ ಕಡಿಮೆಯಾಗಿಲ್ಲ, ಅಂತವರಿಗೆ ತಂಬಾಕು ಸೇವಿಸದವರು ತಿಳುವಳಿಕೆ ಹೇಳಬೇಕು. ಧೂಮಪಾನಿಗಳಿಂದ ಬಂದ ಹೊಗೆ ಸೇವಿಸಿದರೂ ಕೂಡ ಅನಾರೋಗ್ಯಕ್ಕೆ ತುತ್ತಾಗುವ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಬೇಕು. ಆದ್ದರಿಂದ ತಂಬಾಕು ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

Edited By : Nagaraj Tulugeri
Kshetra Samachara

Kshetra Samachara

26/11/2020 09:26 am

Cinque Terre

42.36 K

Cinque Terre

3

ಸಂಬಂಧಿತ ಸುದ್ದಿ