ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 20 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.
ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 186237 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 38 ಜನರ ವರದಿ ನೆಗೆಟಿವ್ ಬಂದಿದೆ. 20 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 179 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 186237 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 185338 ಜನರ ವರದಿ ನೆಗೆಟಿವ್ ಎಂದು ಬಂದಿದೆ.
21334 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20614 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 600 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 123 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 188176 ಜನರ ಮೇಲೆ ನಿಗಾ ಇಡಲಾಗಿದ್ದು, 8819 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
16583 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 162651 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
26/11/2020 09:30 pm