ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 9,842 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,96,095 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 918 ಜನರ ವರದಿ ನೆಗೆಟಿವ್ ಬಂದಿದೆ. 22 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 1,049 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 1,96,095 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,94,336 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21,367 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,657 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 600 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 113 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 1,98,067 ಜನರ ಮೇಲೆ ನಿಗಾ ಇಡಲಾಗಿದ್ದು, 17,786 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16,388 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,63,780 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
28/11/2020 10:45 pm