ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 8 ಪಾಸಿಟಿವ್, 506 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1,473 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 1,97,568 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 506 ಜನರ ವರದಿ ನೆಗೆಟಿವ್ ಬಂದಿದೆ. 8 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 543 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 1,97,568 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 1,96,321 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21,391 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,687 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 600 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 107 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 1,99,540 ಜನರ ಮೇಲೆ ನಿಗಾ ಇಡಲಾಗಿದ್ದು, 16,569 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 14,284 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,68,580 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

30/11/2020 09:56 pm

Cinque Terre

48.99 K

Cinque Terre

2

ಸಂಬಂಧಿತ ಸುದ್ದಿ