ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 16 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 200887 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 475 ಜನರ ವರದಿ ನೆಗೆಟಿವ್ ಬಂದಿದೆ. 16 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 847 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 200887 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 199310 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21443 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20713 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 602 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 131 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 202859 ಜನರ ಮೇಲೆ ನಿಗಾ ಇಡಲಾಗಿದ್ದು, 13077 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 18074 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 171577 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
03/12/2020 11:30 pm