ಧಾರವಾಡ: ಜಿಲ್ಲೆಯಲ್ಲಿಂದು 25 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21,500ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 15 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20,743ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 603 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Kshetra Samachara
05/12/2020 08:34 pm