ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆರೋಗ್ಯ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ, ಡಿ.8 ರಂದು ಕೇಶ್ವಾಪುರದ ಸರ್ವೋದಯ ಸರ್ಕಲ್ ಹತ್ತಿರದ ವಾಲ್ಮೀಕಿ ಭವನದಲ್ಲಿ ಆಯೋಜಿಸಲಾದ ಕೋವಿಡ್ ಜಾಗೃತಿ ಕಾರ್ಯಕ್ರಮವನ್ನು 1 ನೆ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ರವೀಂದ್ರ ಪಲ್ಲೇದ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ತಿಳಿ ಹೇಳಲಾಯಿತು. ವಕೀಲ ಐ .ಜಿ.ತಿಗಡಿ, ವೈದ್ಯ ಪ್ರಕಾಶ್ ಸೇರಿದಂತೆ ನರ್ಸ್ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Kshetra Samachara
09/12/2020 05:40 pm