ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 3,196 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 2,08,876 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 700 ಜನರ ವರದಿ ನೆಗೆಟಿವ್ ಬಂದಿದೆ. 14 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 371 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 2,08,876 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 2,07,756 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21564 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,815 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 604 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 371 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 2,10,848 ಜನರ ಮೇಲೆ ನಿಗಾ ಇಡಲಾಗಿದ್ದು, 11,659 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 20,986 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,78,055 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
09/12/2020 09:58 pm