ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 620 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 209496 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 74 ಜನರ ವರದಿ ನೆಗೆಟಿವ್ ಬಂದಿದೆ. 9 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 297 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 209496 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 208471 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21573 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20845 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 605 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 126 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 211468 ಜನರ ಮೇಲೆ ನಿಗಾ ಇಡಲಾಗಿದ್ದು, 11205 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 20899 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 179238 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
10/12/2020 10:27 pm