ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವೈದ್ಯರ ಮುಷ್ಕರಕ್ಕೆ ವಾಣಿಜ್ಯನಗರಿಯಲ್ಲಿ ವ್ಯಾಪಕ ಬೆಂಬಲ

ಹುಬ್ಬಳ್ಳಿ: ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಗೆ ಅನುಮತಿ‌ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಐಎಂಎ ಕರೆ ನೀಡಿರುವ ಒಂದು ದಿನದ ವೈದ್ಯರ ಮುಷ್ಕರಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿಯಲ್ಲಿಯೂ ಕೂಡ ಬಹತೇಕ ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ನಗರದ ಎಲ್ಲ ಖಾಸಗಿ ಆಸ್ಪತ್ರೆಗಳ‌ ಒಪಿಡಿ ಬಂದ್ ಆಗಿದ್ದು,ಸಂಜೆಯವರೆಗೂ ಒಪಿಡಿ ಸ್ಥಗಿತಗೊಳಿಸಿದ ಖಾಸಗಿ ಆಸ್ಪತ್ರೆಗಳ ವೈದ್ಯರು ನಂತರ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನೂ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿದ ಮುಷ್ಕರಕ್ಕೆ ನೂರಾರು ವೈದ್ಯರು ಬೆಂಬಲ ಸೂಚಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

11/12/2020 02:40 pm

Cinque Terre

75.11 K

Cinque Terre

6

ಸಂಬಂಧಿತ ಸುದ್ದಿ