ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 7 ಪಾಸಿಟಿವ್, 98 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 7 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 213787 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 98 ಜನರ ವರದಿ ನೆಗೆಟಿವ್ ಬಂದಿದೆ. 7 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 196 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 213787 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 212897 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21631 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20937 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 91 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 215759 ಜನರ ಮೇಲೆ ನಿಗಾ ಇಡಲಾಗಿದ್ದು, 11023 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 19386 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 185259 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/12/2020 10:42 pm

Cinque Terre

35.56 K

Cinque Terre

0

ಸಂಬಂಧಿತ ಸುದ್ದಿ