ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1179 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 214966 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 436 ಜನರ ವರದಿ ನೆಗೆಟಿವ್ ಬಂದಿದೆ. 15 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 632 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 214966 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 213635 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21646 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20947 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 96 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 216938 ಜನರ ಮೇಲೆ ನಿಗಾ ಇಡಲಾಗಿದ್ದು, 11320 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 18220 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 187302 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
16/12/2020 10:02 pm