ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 15 ಪಾಸಿಟಿವ್, 29 ನೆಗೆಟಿವ್

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 1276 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 218968 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 29 ಜನರ ವರದಿ ನೆಗೆಟಿವ್ ಬಂದಿದೆ. 15 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 457 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 218968 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 217810 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21674 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20973 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 98 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 220940 ಜನರ ಮೇಲೆ ನಿಗಾ ಇಡಲಾಗಿದ್ದು, 12841 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16507 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 191494 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

18/12/2020 08:24 pm

Cinque Terre

20.03 K

Cinque Terre

0

ಸಂಬಂಧಿತ ಸುದ್ದಿ