ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 2,237 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 2,21,205 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 236 ಜನರ ವರದಿ ನೆಗೆಟಿವ್ ಬಂದಿದೆ. 25 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 221 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 2,21,205 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 2,20,277 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21699 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 20,992 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 104 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 2,23,177 ಜನರ ಮೇಲೆ ನಿಗಾ ಇಡಲಾಗಿದ್ದು, 14,451 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 16,630 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 1,91,992 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
19/12/2020 10:41 pm