ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 398 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 224455 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 138 ಜನರ ವರದಿ ನೆಗೆಟಿವ್ ಬಂದಿದೆ. 24 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 577 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 224455 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 223146 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21755 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21023 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 129 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 226568 ಜನರ ಮೇಲೆ ನಿಗಾ ಇಡಲಾಗಿದ್ದು, 13142 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 15516 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 197781 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
22/12/2020 10:52 pm