ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 15 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ. ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 225591 ಕ್ಕೆ ಏರಿಕೆಯಾಗಿದೆ.
ನಿನ್ನೆ ಕಳುಹಿಸಿದ ಮಾದರಿ ಪೈಕಿ 48 ಜನರ ವರದಿ ನೆಗೆಟಿವ್ ಬಂದಿದೆ. 15 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 369 ಜನರ ವರದಿ ಬರುವುದು ಬಾಕಿ ಉಳಿದಿದೆ.
ಇದುವರೆಗೆ 225591 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 224491 ಜನರ ವರದಿ ನೆಗೆಟಿವ್ ಎಂದು ಬಂದಿದೆ. 21782 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21051 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 606 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 128 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಜಿಲ್ಲೆಯಾದ್ಯಂತ ಒಟ್ಟು 227704 ಜನರ ಮೇಲೆ ನಿಗಾ ಇಡಲಾಗಿದ್ದು, 12978 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
14457 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 200141 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.
Kshetra Samachara
24/12/2020 10:54 pm