ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಾದ್ಯಂತ 13 ಪಾಸಿಟಿವ್, 464 ನೆಗೆಟಿವ್, 1 ಸಾವು

ಧಾರವಾಡ: ಜಿಲ್ಲೆಯಾದ್ಯಂತ ಇಂದು ಮತ್ತೆ 3128 ಜನ ಶಂಕಿತ ಸೋಂಕಿತರಿಂದ ರಕ್ತ ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ನೀಡಲಾಗಿದೆ.

ಆ ಮೂಲಕ ಇದುವರೆಗೆ ಮಾದರಿ ಸಂಗ್ರಹಿಸಿದವರ ಸಂಖ್ಯೆ 228719 ಕ್ಕೆ ಏರಿಕೆಯಾಗಿದೆ.

ನಿನ್ನೆ ಕಳುಹಿಸಿದ ಮಾದರಿ ಪೈಕಿ 464 ಜನರ ವರದಿ ನೆಗೆಟಿವ್ ಬಂದಿದೆ. 13 ಜನರ ವರದಿ ಪಾಸಿಟಿವ್ ಎಂದು ಬಂದಿದೆ. ಇದರೊಟ್ಟಿಗೆ ಜಿಲ್ಲೆಯಾದ್ಯಂತ ಇನ್ನೂ 833 ಜನರ ವರದಿ ಬರುವುದು ಬಾಕಿ ಉಳಿದಿದೆ.

ಇದುವರೆಗೆ 228719 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಅದರಲ್ಲಿ 227153 ಜನರ ವರದಿ ನೆಗೆಟಿವ್ ಎಂದು ಬಂದಿದೆ.

21795 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 21062 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

607 ಜನ ಸೋಂಕಿನಿಂದ ಮೃತಪಟ್ಟಿದ್ದರೆ, ಬಾಕಿ ಇರುವ 129 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಒಟ್ಟು 230917 ಜನರ ಮೇಲೆ ನಿಗಾ ಇಡಲಾಗಿದ್ದು, 14956 ಜನರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

14522 ಜನ ಈಗಾಗಲೇ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 201310 ಜನ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

25/12/2020 07:56 pm

Cinque Terre

23.88 K

Cinque Terre

0

ಸಂಬಂಧಿತ ಸುದ್ದಿ