ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಭ್ಯ

ಧಾರವಾಡ: ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಬಿವ್ಯಾಕ್ಸ್ ಲಸಿಕೆಯನ್ನು (ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ. ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳುಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಇರುವವರು ಮತ್ತು ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕಾಕರಣದ ಮಾರ್ಗಸೂಚಿಯ ಪ್ರಕಾರ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದಾಗಿದೆ.

ಧಾರವಾಡದ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತು ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ ಕಾರ್ಬಿವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಾಟೀಲ ಶಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

03/01/2024 09:32 pm

Cinque Terre

11.53 K

Cinque Terre

0

ಸಂಬಂಧಿತ ಸುದ್ದಿ