ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆ (ಶನಿವಾರ)ಕ್ಕಿಂತ ಕೊಂಚ ಏರಿಕೆ ಕಂಡಿದೆ. ನಿನ್ನೆ 19 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಇಂದು 23 ಜನರಿಗೆ ಕೊರೊನಾ ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಈವರೆಗೂ 60,505 ಜನರಿಗೆ ಸೋಂಕು ದೃಢಪಟ್ಟಿದೆ. ಡೆಡ್ಲಿ ಸೋಂಕಿನಿಂದ ಇಂದು 28 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59069 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,278 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 156 ಸಕ್ರಿಯ ಪ್ರಕರಣಗಳಿವೆ.
Kshetra Samachara
01/08/2021 07:13 pm