ಧಾರವಾಡ: ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಧಾರವಾಡ ಜಿಲ್ಲಾಧಿಕಾರಿಗಳು ಕೆಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದ್ದಾರೆ.
ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಧಾರವಾಡ ಜಿಲ್ಲೆಗೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಯೊಳಗೆ ಕೊರೊನಾ ತಪಾಸಣೆ ನಡೆಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ಇದು ಬಸ್ಸು, ರೈಲು, ವಿಮಾನದ ಮೂಲಕ ಪ್ರಯಾಣಿಕರಿಗೆ ಅನ್ವಯವಾಗುತ್ತದೆ.
ಸಾರಿಗೆ ಸಂಸ್ಥೆ, ವಿಮಾನ ನಿಲ್ದಾಣದ ಸಿಬ್ಬಂದಿ, ರೈಲ್ವೆ ಇಲಾಖೆ ಸಿಬ್ಬಂದಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವ ಪ್ರಯಾಣಿಕರ ಆರ್‌ಟಿಪಿಸಿಆರ್ ಕೊರೊನಾ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Kshetra Samachara
03/08/2021 03:19 pm