ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆಯಾಗುತ್ತಿದೆ. ಆಗಷ್ಟ್ 2ರಿಂದ ಸೋಂಕಿತರ ಸಂಖ್ಯೆ ಎರಡಂಕಿ ದಾಟಿರಲಿಲ್ಲ. ಆದರೆ ಇಂದು 10 ಜನರಿಗೆ ಕೊರೊನಾ ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಈವರೆಗೂ 60,540 ಜನರಿಗೆ ಸೋಂಕು ದೃಢಪಟ್ಟಿದೆ. ಡೆಡ್ಲಿ ಸೋಂಕಿನಿಂದ ಇಂದು 5 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,098 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,280 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 160 ಸಕ್ರಿಯ ಪ್ರಕರಣಗಳಿವೆ.
Kshetra Samachara
05/08/2021 07:10 pm