ಹುಬ್ಬಳ್ಳಿ: ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆಧ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 304 ಮಾಧ್ಯಮ ಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೋವಿಶೀಲ್ಡ್ ಒಂದು ಮತ್ತು ಎರಡನೇ ಡೋಸ್ ಹಾಗೂ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡರು.
18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದುಕೊಂಡರು. ವಿದ್ಯುನ್ಮಾನ ಮಾಧ್ಯಮ ಕೆಲಸ ನಿರ್ವಹಿಸುವ ವರದಿಗಾರರು, ವಿಡಿಯೋ ಜರ್ನಲಿಸ್ಟ್, ಮುದ್ರಣ ಮಾಧ್ಯಮದ ವರದಿಗಾರರು, ಉಪಸಂಪಾದಕರು, ಪೋಟೊ ಜರ್ನಲಿಸ್ಟ್ ಹಾಗೂ ವಾರ್ತಾ ಇಲಾಖೆ ಸಿಬ್ಬಂದಿ ಹಾಗೂ ಕುಟುಂಬಸ್ಥರು ಲಸಿಕೆ ಪಡೆದುಕೊಂಡರು.
Kshetra Samachara
06/08/2021 05:35 pm