ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಮೊದಲ ಹಾಗೂ ಎರಡನೇ ಅಲೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವ ಜಿಲ್ಲಾಡಳಿತ ಮೂರನೇ ಅಲೆಗೆ ಸದ್ದಿಲ್ಲದೆ ಸಿದ್ಧತೆ ನಡೆಸಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಅಂತೀರಾ ಈ ಸ್ಟೋರಿ ನೋಡಿ..
ಕಿಲ್ಲರ್ ಕೊರೋನಾದ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದ ಧಾರವಾಡ ಜಿಲ್ಲಾಡಳಿತ ಈಗ ಪ್ರಾರಂಭಿಕ ಹಂತದಲ್ಲಿಯೇ ಸಿದ್ಧತೆ ನಡೆಸಿದೆ. ಕಳೆದ ಬಾರಿ ಬೆಡ್, ಆಕ್ಸಿಜನ್ ಹಾಗೂ ವೆಂಟಿಲೇಟರ್ ಸಮಸ್ಯೆ ಎದುರಿಸಿದ್ದ ಜಿಲ್ಲಾಡಳಿತ ಈಗಾಗಲೇ 500 ಬೆಡ್ ಹೆಚ್ಚಳಕ್ಕೆ ಹಾಗೂ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಕಾಡುವ ಬಗ್ಗೆ ತಜ್ಞರು ನೀಡಿರುವ ಮಾಹಿತಿ ಬೆನ್ನಲ್ಲೇ ಮಕ್ಕಳಿಗೆ ಚಿಕಿತ್ಸೆ ನೀಡಲು ಮತ್ತಷ್ಟು ಮ್ಯಾನ್ ಪವರ್ ಹಾಗೂ ಮೂಲಭೂತ ಸೌಕರ್ಯಗಳ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ ಮೂರನೇ ಅಲೆ ಇನ್ನೂ ಬಂದಿಲ್ಲ. ಸದ್ಯ 8 -10 ಕೋವಿಡ್ ಕೇಸ್ ಮಾತ್ರ ಬರುತ್ತಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗುತ್ತಾ ಇವೆ. ಆದರೆ ಮುಂದಿನ ದಿನಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರದ ಆದೇಶದಂತೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಇನ್ನೂ ಎಲ್ಲ ಆಸ್ಪತ್ರೆಗಳಲ್ಲಿಯೂ ಮೂರನೇ ಅಲೆ ಎದುರಿಸಲು ಪೂರ್ವಸಿದ್ಧತೆ ನಡೆಸಲಾಗಿದೆ. ಕಿಮ್ಸ್ ನಲ್ಲಿ ಮೂರು ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ಬಂದಿವೆ. ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಪ್ಲಾಂಟ್ ಅಸ್ತಿತ್ವಕ್ಕೆ ತರಲಾಗಿದೆ. ಕಿಮ್ಸ್, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನೂ ಸಿದ್ಧ ಮಾಡಿಕೊಳ್ಳಲಾಗಿದೆ.
ಒಟ್ಟಿನಲ್ಲಿ ಮಕ್ಕಳಿಗಾಗಿಯೂ 500 ಬೆಡ್ ಗಳ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಸದ್ಧು ಇಲ್ಲದೇ ಸಿದ್ಧತೆ ಮಾಡುತ್ತಿದೆ.
Kshetra Samachara
09/08/2021 01:33 pm