ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆಯಾಗಿದೆ. ಆದರೆ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60,567ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು 15 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,147 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,288 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 130 ಸಕ್ರಿಯ ಪ್ರಕರಣಗಳಿವೆ.
Kshetra Samachara
09/08/2021 07:03 pm