ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ. ಆದರೆ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 10 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 60,657ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು 13 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,240 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,291 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 124 ಸಕ್ರಿಯ ಪ್ರಕರಣಗಳಿವೆ.
Kshetra Samachara
18/08/2021 07:06 pm