ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ ಕಾಣುತ್ತಿದ್ದು, ಹೆಮ್ಮಾರಿ ಆತಂಕ ಕೊಂಚ ಕಡಿಮೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಐವರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,673ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು 24 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,288 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,293 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 90 ಸಕ್ರಿಯ ಪ್ರಕರಣಗಳಿವೆ.
Kshetra Samachara
21/08/2021 06:33 pm