ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ಭಾರೀ ಇಳಕೆ ಕಂಡಿತ್ತು. ಇಂದು ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದರೂ, ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 9 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,737ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು ನಾಲ್ವರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,368 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,298 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 69 ಸಕ್ರಿಯ ಪ್ರಕರಣಗಳಿವೆ.
Kshetra Samachara
31/08/2021 07:17 pm