ಧಾರವಾಡ: ಜಿಲ್ಲೆಯಲ್ಲಿ ಇಂದು ಐವರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,776ಕ್ಕೆ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಜಿಲ್ಲೆಯಲ್ಲಿ ಇಂದು 7 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,387 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,300 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 87 ಸಕ್ರಿಯ ಪ್ರಕರಣಗಳಿವೆ.
Kshetra Samachara
04/09/2021 07:19 pm