ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆ ಕಂಡಿದ್ದು, ಇಂದು ಕೇವಲ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,805ಕ್ಕೆ ಏರಿಕೆ ಕಂಡಿದೆ. ಡೆಡ್ಲಿ ಸೋಂಕಿನಿಂದ ಇಂದು 8 ಜನರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,437 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,301 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 65 ಸಕ್ರಿಯ ಪ್ರಕರಣಗಳಿವೆ.
Kshetra Samachara
11/09/2021 06:58 pm