ಧಾರವಾಡ: ಜಿಲ್ಲೆಯ ಜನರಿಗೆ ಒಂದು ಹಿಸಿ ಸುದ್ದಿ ಸಿಕ್ಕಿದೆ. ಇಂದು ಒಂದೇ ಒಂದು ಕೊರೊನಾ ಕೇಸ್ ಪತ್ತೆಯಾಗಿಲ್ಲ. ಅಷ್ಟೇ ಅಲ್ಲದೆ ಸೋಂಕಿನಿಂದ ಸಾವು ಕೂಡ ಸಂಭವಿಸಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಯಾರಿಗೂ ಸೋಂಕು ತಗುಲಿಲ್ಲ. ಈವರೆಗೂ 60,814ಕ್ಕೆ ಏರಿಕೆ ಕಂಡಿದೆ ಜನರಿಗೆ ಸೋಂಕು ದೃಢಪಟ್ಟಿದೆ. ಡೆಡ್ಲಿ ಸೋಂಕಿನಿಂದ ಇಂದು ಐವರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,450 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,301 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 61 ಸಕ್ರಿಯ ಪ್ರಕರಣಗಳಿವೆ.
Kshetra Samachara
13/09/2021 07:06 pm