ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಕಾಣುತ್ತಿದ್ದು, ಇಂದು ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಇಂದು 9 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 60,834ಕ್ಕೆ ಏರಿಕೆ ಕಂಡಿದೆ ಜನರಿಗೆ ಸೋಂಕು ದೃಢಪಟ್ಟಿದೆ. ಡೆಡ್ಲಿ ಸೋಂಕಿನಿಂದ ಇಂದು 5 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,486 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,302 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 44 ಸಕ್ರಿಯ ಪ್ರಕರಣಗಳಿವೆ.
Kshetra Samachara
17/09/2021 06:30 pm