ಧಾರವಾಡ: ಕೊರೊನಾ ಲಸಿಕೆ ಹಾಕಿಸಿಕೊಂಡ ಪೊಲೀಸರಿಗೆ ಇಂಡಿಯನ್ ಆಯಿಲ್ ಕಂಪೆನಿ ವತಿಯಿಂದ ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡಲಾಗಿದೆ.
ಧಾರವಾಡದ ಪೊಲೀಸ್ ಹೆಡ್‌ಕ್ವಾರ್ಟರ್ಸ್‌ನಲ್ಲಿರುವ ಕರಿಯಮ್ಮನ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೊಲೀಸರಿಗೆ ಹೆಲ್ಮೆಟ್‌ಗಳನ್ನು ವಿತರಣೆ ಮಾಡಲಾಗಿದೆ. ಜೊತೆಗೆ ಪೊಲೀಸರು ಮತ್ತು ಅವರ ಕುಟುಂಬದವರಿಗೆ ಕೊರೊನಾ ಲಸಿಕೆ ಕೂಡ ಹಾಕಿಸಲಾಗಿದೆ.
ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರು ಲಸಿಕೆ ಹಾಕಿಸಿಕೊಂಡು ಸುರಕ್ಷಿತವಾಗಿರಬೇಕು ಹಾಗೂ ಬೈಕ್ ಚಲಾವಣೆ ವೇಳೆಯೂ ಅವರು ಸುರಕ್ಷಿತವಾಗಿರಬೇಕು ಎಂದು ಇಂಡಿಯನ್ ಆಯಿಲ್ ಕಂಪೆನಿ ಮುಖ್ಯಸ್ಥರು ಪೊಲೀಸರಿಗೆ ಈ ರೀತಿ ಹೆಲ್ಮೆಟ್‌ಗಳನ್ನು ನೀಡಿ ಗಮನಸೆಳೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Kshetra Samachara
17/09/2021 06:49 pm