ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆ ಕಾಣುತ್ತಿದೆ. ವಿಶೇಷವೆಂದರೆ ಇಂದು ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ಈವರೆಗೂ 60,874ಕ್ಕೆ ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು 9 ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,536 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 1,304 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 32 ಸಕ್ರಿಯ ಪ್ರಕರಣಗಳಿವೆ.
Kshetra Samachara
27/09/2021 07:12 pm