ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ ಕಂಡಿದೆ. ನಿನ್ನೆ ಏಳು ಕೊರೊನಾ ಕೇಸ್ಗಳು ಪತ್ತೆಯಾಗಿದ್ದವು. ಆದರೆ ಇಂದು 5 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 60,886ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಡೆಡ್ಲಿ ಸೋಂಕಿನಿಂದ ಇಂದು 5 ಜನ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ 59,543 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 1,305 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 36 ಸಕ್ರಿಯ ಪ್ರಕರಣಗಳಿವೆ.
Kshetra Samachara
29/09/2021 07:28 pm